ವಿಜಯನಗರ: ವುವಾಹಿತ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿ ಪರಾರಿಯಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಚಾಪಲಗಡ್ಡೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹಿಳೆ ಕೆಲ ವರ್ಷಗಳಿಂದ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸವಾಗಿದ್ದರು. ಮಹಿಳೆಯ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಆಕೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಚಿತ್ತವಾಡ್ಗಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

