HomeKarnatakaಅಮಿತ್ ಶಾ ಹೇಳಿಕೆ ವಿರೋಧಿಸಿ ಬಂದ್ ಕರೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ: ಮದ್ಯ...

ಅಮಿತ್ ಶಾ ಹೇಳಿಕೆ ವಿರೋಧಿಸಿ ಬಂದ್ ಕರೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ: ಮದ್ಯ ಮಾರಾಟ ನಿಷೇಧಿಸಿ ವಿಜಯಪುರ ಡಿಸಿ ಆದೇಶ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ನಾಳೆ ವಿಜಯಪುರ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ನಾಳೆ ರಾತ್ರಿಯವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ನಾಳೆ ನಡೆಯಬೇಕಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ನಾಳೆ ಬಂದ್ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular