ಜಮ್ಮು-ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮ ; ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ.!

ವಿಜಯಪುರ : ಜಮ್ಮು ಕಾಶ್ಮೀರದಲ್ಲಿ ವಿಜಯಪುರ ಮೂಲದ ಯೋಧ ಹುತಾತ್ಮರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ರೆಜಿಮೆಂಟ್ 13ರಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರ ಜಿಲ್ಲೆಯ ತಿಕೋಟಾ ಮೂಲದ ಯೋಧ ರಾಜು ಕರ್ಜಗಿ ಅವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖವಾಯಿತು. ಇವರ ಅಗಲಿಕೆ ಭಾರತೀಯ ಸೇನೆಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

https://twitter.com/DKShivakumar/status/1808030064313094541

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read