HomeKarnatakaBREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರ್ ನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಬಲೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular