ವಿಜಯಪುರ ಸೇರಿದಂತೆ ಹಲವೆಡೆ ಕಂಪಿಸಿದ ಭೂಮಿ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಂಪನದ ಅನುಭವ ಆಗಿದೆ. ಸಂಜೆ 5:45 ರ ಸುಮಾರಿಗೆ ಭೂಮಿ ಕಂಪಿಸಿದ್ದು, ಭಾರಿ ಶಬ್ದದ ಜೊತೆಗೆ ಕಂಪನದ ಅನುಭವ ಆಗಿದೆ.

ವಿಜಯಪುರದ ಗೋಳಗುಮ್ಮಟ, ಕೀರ್ತಿ ನಗರ, ಜಲನಗರ, ತೊರವಿ, ಗಣೇಶನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ದೊಡ್ಡ ಶಬ್ದ ಕೇಳಿ ಬಂದಿದೆ. ಇತ್ತೀಚೆಗೆ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಅನೇಕ ಸಲ ಕಂಪನವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read