HomeKarnatakaತಡರಾತ್ರಿ ಬಸ್ ನಿಲ್ದಾಣದಲ್ಲಿದ್ದ ಯುವತಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ

ತಡರಾತ್ರಿ ಬಸ್ ನಿಲ್ದಾಣದಲ್ಲಿದ್ದ ಯುವತಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ

 ವಿಜಯಪುರ: ವಿಜಯಪುರದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜನವರಿ 17 ರಂದು ತಡರಾತ್ರಿ ನಡೆದಿದೆ.

ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಮೂವರು ಯುವಕರು ಪುಸಲಾಯಿಸಿ ಸ್ಯಾಟಲೈಟ್ ಬಸ್ ನಿಲ್ದಾಣದ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಒಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಉಳಿದವರು ಸಾಥ್ ನೀಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ನಂತರ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ. ಜನವರಿ 18ರಂದು ಯುವತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಯುವತಿಯನ್ನು ರಕ್ಷಿಸಿ ವಿಚಾರಣೆ ನಡೆಸಿದಾಗ ಅತ್ಯಾಚಾರ ನಡೆದ ಬಗ್ಗೆ ಮಾಹಿತಿ ನೀಡಿದ್ದಾಳೆ. ಯುವತಿಗೆ ಚಿಕಿತ್ಸೆ ಕೊಡಿಸಿ ಸ್ವಾದ್ವಾರ ಕೇಂದ್ರದಲ್ಲಿ ಇರಿಸಲಾಗಿದೆ. ವಿಜಯಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular