HomeKarnatakaರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಹೇಬಪಟೇಲ್ ಖಾಜಾ ಪಟೇಲ್ ಕಾಚಾಪುರ(55) ಮೃತಪಟ್ಟವರು ಎಂದು ಹೇಳಲಾಗಿದೆ. 18ನೇ ವಯಸ್ಸಿನಿಂದಲೂ ಸಾಹೇಬ ಪಟೇಲ್ ರಥದ ಕಲಶ ಕಟ್ಟುತ್ತಿದ್ದರು. ಕಳಶ ಕಟ್ಟುವಾಗ ಕೈಯಲ್ಲಿದ್ದ ಹಗ್ಗ ಜಾರಿದ್ದರಿಂದ ದುರಂತ ನಡೆದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾಹೇಬ ಪಟೇಲ್ ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ರಥೋತ್ಸವವನ್ನು ಗ್ರಾಮಸ್ಥರು ರದ್ದುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular