HomeKarnatakaಅಪಾರ ಸಂಖ್ಯೆಯಲ್ಲಿ ಮಠಕ್ಕೆ ಬಂದು ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ಪಟ್ಟು ಹಿಡಿದ ಭಕ್ತರು

ಅಪಾರ ಸಂಖ್ಯೆಯಲ್ಲಿ ಮಠಕ್ಕೆ ಬಂದು ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ಪಟ್ಟು ಹಿಡಿದ ಭಕ್ತರು

ವಿಜಯಪುರ: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಗೇಟ್ ಮುಂಭಾಗದಲ್ಲಿ ಭಾರಿ ಸಂಖ್ಯೆಯ ಭಕ್ತರು ನೆರೆದಿದ್ದಾರೆ. ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ನಾಡಿನ ಗಣ್ಯರು, ಮಠಾಧೀಶರು ಹಾಗೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡತೊಡಗಿದ್ದಾರೆ. ಶ್ರೀಗಳ ಆರೋಗ್ಯ ಸುಧಾರಿಸಿದೆ ಎಂದು ಮಠಕ್ಕೆ ಭೇಟಿ ನೀಡಿದ ಗಣ್ಯರು ಹೇಳಿದ್ದಾರೆ. ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular