HomeCrimeಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ: ಹಾಡಹಗಲೇ ಮಾರಕಾಸ್ತ್ರಗಳಿಂದ ಥಳಿಸಿ ಶಿಕ್ಷಕಿ ಹತ್ಯೆ

ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ: ಹಾಡಹಗಲೇ ಮಾರಕಾಸ್ತ್ರಗಳಿಂದ ಥಳಿಸಿ ಶಿಕ್ಷಕಿ ಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಹತ್ಯೆ ಮಾಡಲಾಗಿದೆ. ಕೊಲೆಯಾದ ದಿಲ್ಶಾದ್ ಅವರ ಪುತ್ರ ಮುಜಾಮಿಲ್ ಮೇಲೆಯೂ ಹಲ್ಲೆ ನಡೆಸಲಾಗಿದೆ. ಮುಜಾಮಿಲ್ ಸ್ಥಿತಿ ಗಂಭೀರವಾಗಿದ್ದು ವಿಜಯಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೀಕರ ಹತ್ಯೆಯಿಂದಾಗಿ ಇಂಡಿ ಪಟ್ಟಣದ ಜನರು ಬೆಚ್ಚಿಬಿದ್ದಿದ್ದಾರೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇಂಡಿ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular