HomeKarnatakaBIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಎರಡು ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಬಳಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜೀದಾ ಬೇಗಂ (36), ರೋಹಿಣಿ ಪಂಚಾಳ (31) ಮೃತ ದುರ್ದೈವಿಗಳು.

ಗಾಯಾಳು ಪ್ರಯಾಣಿಕರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿದ್ದು, ಎರಡೂ ಸರ್ಕಾರಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular