HomeKarnatakaಉದ್ಘಾಟನೆಗೆ ಸಜ್ಜಾದ ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆ

ಉದ್ಘಾಟನೆಗೆ ಸಜ್ಜಾದ ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆ

ವಿಜಯಪುರ ವಿಮಾನ ನಿಲ್ದಾಣದಲ್ಲಿ ಮಹತ್ವಾಕಾಂಕ್ಷಿ ಯೋಜನೆ ಬರಲಿದೆ. ವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆಗೆ ಕಾರ್ವರ್ ಏವಿಯೇಷನ್ ಆಸಕ್ತಿ ತೋರಿಸಿದೆ.

ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ವಿಮಾನ ನಿಲ್ದಾಣವನ್ನು ಕೇವಲ ವೈಮಾನಿಕ ಸಂಪರ್ಕದ ಕೇಂದ್ರವನ್ನಾಗಿಸುವುದಷ್ಟೇ ಅಲ್ಲದೆ, ವೈಮಾನಿಕ ಶಿಕ್ಷಣ, ತರಬೇತಿ ಹಾಗೂ ಉದ್ಯೋಗದ ಹೊಸ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದ್ದೇವೆ ಎಂದು ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ನೆಲೆಯೂರಿರುವ ಕಾರ್ವರ್ ಏವಿಯೇಷನ್ ಸಂಸ್ಥೆಯು ವಿಜಯಪುರ ವಿಮಾನ ನಿಲ್ದಾಣದಲ್ಲಿ ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ ಸ್ಥಾಪಿಸಲು ಆಸಕ್ತಿ ವ್ಯಕ್ತಪಡಿಸಿದೆ. ಈ ಕುರಿತು ಸಂಸ್ಥೆಯ ನಿರ್ದೇಶಕ ನೆವಿಲ್ ಭರೂಚ ಹಾಗೂ ವ್ಯವಸ್ಥಾಪಕ ಪರಮೇಶ್ ಪಾರೀಖ್ ಅವರೊಂದಿಗೆ ಎಂ.ಬಿ. ಪಾಟೀಲ್ ಇಂದು ಮಹತ್ವದ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಇಲ್ಲಿ ಪೈಲಟ್ ತರಬೇತಿಯ ಜೊತೆಗೆ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ನಿರ್ವಹಣಾ ಸೇವೆಗಳು (MRO), ಹ್ಯಾಂಗರ್‌ಗಳು ಹಾಗೂ ಗ್ರೌಂಡ್ ಸಪೋರ್ಟ್ ಸೌಲಭ್ಯಗಳು ಅಭಿವೃದ್ಧಿಯಾಗಲಿವೆ.

ಇದರಿಂದ ಉತ್ತರ ಕರ್ನಾಟಕದಲ್ಲಿ ವೈಮಾನಿಕ ಕ್ಷೇತ್ರಕ್ಕೆ ಹೊಸ ಅವಕಾಶಗಳು ತೆರೆದುಕೊಳ್ಳುವುದರ ಜೊತೆಗೆ, ಸ್ಥಳೀಯ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಪೈಲಟ್ ತರಬೇತಿ ಪಡೆಯಲು ಉತ್ತಮ ಅವಕಾಶಗಳು ಹಾಗೂ ನೂರಾರು ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವಿಶೇಷವಾಗಿ, ಸ್ಥಳೀಯ ವಿದ್ಯಾರ್ಥಿಗಳಿಗೆ ತರಬೇತಿ ಶುಲ್ಕದಲ್ಲಿ ಆಕರ್ಷಕ ರಿಯಾಯಿತಿ ನೀಡುವುದಾಗಿ ಸಂಸ್ಥೆಯು ಭರವಸೆ ನೀಡಿರುವುದು ಸಂತಸದ ಸಂಗತಿ.

ಮುಂದಿನ ಹಂತದಲ್ಲಿ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಮತ್ತೊಂದು ಸಭೆ ನಡೆಸಿ, ಅಕಾಡೆಮಿಯ ರೂಪುರೇಷೆ, ಮೂಲಸೌಕರ್ಯ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular