HomeKarnatakaBIG NEWS: ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಮತ್ತೊಂದು ಅವತಾರ; ಯತ್ನಾಳ್ ವಾಗ್ದಾಳಿ

BIG NEWS: ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಮತ್ತೊಂದು ಅವತಾರ; ಯತ್ನಾಳ್ ವಾಗ್ದಾಳಿ

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಕನ್ನಡ ಭಾಷೆ ತೆಗೆದುಹಾಕಿ ಪರ್ಷಿಯನ್ ಕಲಿಕೆಯನ್ನು ಕಡ್ಡಾಯ ಮಾಡಿದ ಹಾಗೆ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉರ್ದುವನ್ನು ಪ್ರಥಮ ಭಾಷೆಯನ್ನಾಗಿ ಮಾಡಿಬಿಡುತ್ತಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯವರು ರಾಮ ಮಂದಿರ ನಿರ್ಮಾಣ ಮಾಡಿದರೆ ಕ್ಯಾತೆ ತೆಗೆಯುವ ಕಾಂಗ್ರೆಸ್ ನಾಯಕರು ತಾವೇನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular