HomeKarnatakaSHOCKING NEWS: 7 ತಿಂಗಳ ಹಸುಗೂಸನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟುಹೋದ ಪೋಷಕರು

SHOCKING NEWS: 7 ತಿಂಗಳ ಹಸುಗೂಸನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟುಹೋದ ಪೋಷಕರು

ವಿಜಯಪುರ: ನಿರ್ಮಾಣ ಹಂತದ ಕಟ್ಟಡದಲ್ಲಿ 7 ತಿಂಗಳ ಮಗುವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಶ್ರಮ ರಸ್ತೆಯಲ್ಲಿನ ಕಟ್ಟಡದಲ್ಲಿ ನಡೆದಿದೆ.

7 ತಿಂಗಳ ಮುದ್ದಾದ ಹೆಣ್ಣುಮಗುವನ್ನು ಬಟ್ಟೆಯಲ್ಲಿ ಸುತ್ತಿ ಪೋಷಕರು ಕಟ್ಟಡದಲ್ಲಿ ಬಿಟ್ಟು ಹೋಗಿದ್ದಾರೆ. ಬೆಳಿಗ್ಗೆ ವಾಯು ವಿಹಾರಕ್ಕೆ ಹೋಗುತ್ತಿದ್ದ ಸ್ಥಳೀಯರು ಮಗು ಅಳುತ್ತಿರುವ ಶಬ್ದ ಕೇಳಿ ಸಮೀಪ ಬಂದು ನೋಡಿದ್ದಾರೆ. ಬಟ್ಟೆಯಲ್ಲಿ ಸುತ್ತಿಟ್ಟ ರೀತಿಯಲ್ಲಿ ಕಂದಮ್ಮ ಪತ್ತೆಯಾಗಿದೆ.

ತಕ್ಷಣ ಆದರ್ಶ ನಗರದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಗುವಿಗೆ ಹಾಲುಣಿಸಿ, ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಬಳಿಕ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಶಕ್ಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿನ ಪೋಷಕರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular