HomeAutoBREAKING NEWS: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಡವಳಗಿಯಲ್ಲಿ ನಡೆದಿದೆ.

ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ ಹಿರೇಮಠ (55) ಮೃತ ದುರ್ದೈವಿಗಳು. ಮೃತರು ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ನಿವಾಸಿಗಳು. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುದ್ದೆಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular