BIG NEWS: ಮತ್ತೆ ಪ್ರತ್ಯಕ್ಷವಾಗಿದೆ ಚಡ್ಡಿ ಗ್ಯಾಂಗ್…..! ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಪೊಲೀಸರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅಂತರಾಜ್ಯ ಕಳ್ಳರ ಗುಂಪು ಚಡ್ಡಿ ಗ್ಯಾಂಗ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು. ನಗರದಲ್ಲಿ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ.

ಚಡ್ಡಿ ಗ್ಯಾಂಗ್ ನಲ್ಲಿ 5-8 ಜನರಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಡ್ಡಿ, ಬನಿಯನ್, ಮಾಸ್ಕ್ ಧರಿಸಿ ಬಂದು ಮನೆಯಲ್ಲಿದ್ದ ಚಿನ್ನಾಭರಣ, ಹಣ ದರೋಡೆ ಮಾಡುವುದೇ ಇವರ ಕೆಲಸ. ವಿಜಯಪುರದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ಕೈಚಳಕಕ್ಕೆ ಪೊಲೀಸರೇ ಸುಸ್ತಾಗಿದ್ದಾರೆ. ಸಾರ್ವಜನಿಕರು ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ.

ಚಡ್ಡಿ ಗ್ಯಾಂಗ್ ನ ವೇಷ ಭೂಷಣದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ಕಂಡುಬಂದರೆ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. 9480804200 ಅಥವಾ 112 ಗೆ ಕರೆ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read