BIG NEWS: ಮಳೆ ಅಬ್ಬರದ ನಡುವೆ ವಿಜಯಪುರದಲ್ಲಿ ಭೂಕಂಪ

ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ.

ವಿಜಯಪುರದ ತಿಕೋಟಾ ತಾಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹುಬನೂರು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಆತಂಕಕ್ಕೀಡಾದ ಜನರು ಮನೆಗಳಿಂದ ಹೊರಬಂದು ನಿಂತಿದ್ದಾರೆ.

ಇದೇ ವೇಳೆ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದ ಮೊರಬಗಿ, ತಿಕ್ಕುಂಡಿ, ಆಸಂಗಿ ಗ್ರಾಮಗಳಲ್ಲಿಯೂ ಭೂಮಿ ನಡುಗಿದ ಅನುಭವವಾಗಿದೆ.

ಮಧ್ಯಾಹ್ನ ಸುಮಾರು 11:29ರ ಸುಮಾರಿಗೆ ಭಾರಿ ಶಬ್ಧಗಳೊಂದಿಗೆ ಭೂಮಿ ಕಂಪಿಸಿದ್ದು, ಮನೆಗಳಲ್ಲಿನ ವಸ್ತುಗಳು, ಅಡುಗೆ ಮನೆಗಳಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read