ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ: ಸಹಾಯಕ ಪ್ರಾಧ್ಯಾಪಕ ಸೇರಿ ನಾಲ್ವರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳೂ ಕೂಡ ಭಾಗಿಯಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂಧಿದೆ.

ವಿಜಯಪುರದ ಸೊಲ್ಲಾಪುರ ಬ್ರಿಡ್ಜ್ ಬಳಿ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸಹಾಯಕ ಪ್ರಾಧ್ಯಾಪಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಜಯಪುರದ ಖಾಸಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಕಾಶ್ ರಾಠೋಡ್, ಆಂಧ್ರ ಪ್ರದೇಶ ಮೂಲದ ವಿದ್ಯಾರ್ಥಿ ಸಾಯಿಹೇಮಂತ್ ತಾಟಿ, ಅಭಿಮನ್ಯು ಚೌವ್ಹಾಣ್, ಅವಿನಾಶ್ ಮೇತ್ರಿ ಎಂದು ಗುರುತಿಸಲಾಗಿದೆ.

ಬಂಧಿತರಿಂದ 7.50 ಕೆಜಿ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ವಿಜಯಪುರದ ಗಡಿ ಭಾಗದಲ್ಲಿ ಮಾದಕವಸ್ತುಗಳ ಸಂಗ್ರಹ ಹಾಗೂ ಮಾರಾಟ ಜಾಲ ವ್ಯಾಪಕವಾಗಿ ಹರಡಿದ್ದು, ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರು ಸತತವಾಗಿ ಯತ್ನಿಸುತ್ತಿದ್ದಾರೆ. ಆದರೂ ಸಾಧ್ಯವಾಗಿಲ್ಲ. ಇದೀಗ ಪ್ರಾಧ್ಯಾಪಕ, ವಿದ್ಯಾರ್ಥಿ ಸೇರಿದಂತೆ ನಾಲ್ವರು ಅರೆಸ್ಟ್ ಆಗಿದ್ದು, ನಶೆಯ ಜಾಲ ಜಿಲ್ಲೆಯಾದ್ಯಂತ ಹರಡಿರುವ ಶಂಕೆ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read