HomeKarnatakaBIG NEWS: ವಿದ್ಯಾರ್ಥಿಗಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯಶಿಕ್ಷಕ

BIG NEWS: ವಿದ್ಯಾರ್ಥಿಗಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯಶಿಕ್ಷಕ

ವಿಜಯಪುರ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ್ ರಕ್ಕಸಗಿ ಮಕ್ಕಳಿಂದ ತಮ್ಮ ಕಾರು ಸ್ವಚ್ಛ ಮಾಡಿಸಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಶಿಕ್ಷಕರ ಕಾರನ್ನು ತೊಳೆದು ಸ್ವಚ್ಛ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳಿಂದ ಕಾರು ತೊಳೆಸಿರುವ ಮುಖ್ಯ ಶಿಕ್ಷಕರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular