HomeLatest NewsBREAKING: ಬಿರುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ದುರರ್ಮರಣ

BREAKING: ಬಿರುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ದುರರ್ಮರಣ

ವಿಜಯಪುರ: ಬಿರುಗಾಳಿ, ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಮನೆ ಮೇಲ್ಛಾವಣಿ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ಅವಸೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಗೀತಾ ಬಾಳಾಸಾಹೇಬ್ ಪಾಟೀಲ್ (30) ಮೃತ ಮಹಿಳೆ. ತಡರಾತ್ರಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಮಕ್ಕಳು ಮನೆಯಿಂದ ಹೊರಬಂದು ಪಾರಾಗಿದ್ದಾರೆ. ಸ್ಥಳೀಯರು ಮಣ್ಣಿನಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಅವರ ಮೃತದೇಹ ಹೊರತೆಗೆದಿದ್ದಾರೆ.

ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular