HomeLatest NewsBREAKING: ಕಾಲು ಜಾರಿ ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ

BREAKING: ಕಾಲು ಜಾರಿ ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ

ವಿಜಯಪುರ: ಕಾಲು ಜಾರಿ ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೆಬಿಎನ್ ಎಲ್ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಬಸಮ್ಮ ಕೊಣ್ಣೂರು (21), ಸಂತೋಷ್ ಕೊಣ್ಣೂರು (16), ರವಿ ಕೊಣ್ಣೂರು (15) ನಾಪತ್ತೆಯಾದವರು. ಮುದ್ದೆಬಿಹಾಳ ಪಟ್ಟಣದ ಆಶ್ರಯ ಕಾಲೋನಿ ನಿವಾಸಿಗಳು.

ಸ್ಥಳಕ್ಕೆ ಮುದ್ದೆಬಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular