HomeLatest NewsBREAKING: ವಿಜಯಪುರ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್: ಅನರ್ಹತೆಗೆ ತಡೆ ನೀಡಿದ ಕಲಬುರಗಿ ಹೈಕೋರ್ಟ್

BREAKING: ವಿಜಯಪುರ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್: ಅನರ್ಹತೆಗೆ ತಡೆ ನೀಡಿದ ಕಲಬುರಗಿ ಹೈಕೋರ್ಟ್

ವಿಜಯಪುರ: ಅನರ್ಹಗೊಂಡಿದ್ದ ವಿಜಯಪುರ ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರಿಗೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.

ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು. ಇದೀಗ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ತಡೆ ನೀಡಿದೆ.

ಆಸ್ತಿ ಪ್ರಮಾಣ ಪತ್ರ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಪಾಲಿಕೆ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 35 ಸದಸ್ಯರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ಕೋರ್ಟ್ ತಡೆ ನೀಡಿದ್ದು, ಮಹಾನಗರ ಪಾಲಿಕೆಯ 35 ಸದಸ್ಯರು ನಿರಾಳರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular