HomeKarnatakaವಿಜಯಪುರದಲ್ಲಿ ಘೋರ ದುರಂತ: ಮೆಕ್ಕೆಜೋಳ ಚೀಲಗಳು ಬಿದ್ದು ಕಾರ್ಮಿಕರ ದುರ್ಮರಣ: ಮೂವರ ಶವ ಹೊರಕ್ಕೆ

ವಿಜಯಪುರದಲ್ಲಿ ಘೋರ ದುರಂತ: ಮೆಕ್ಕೆಜೋಳ ಚೀಲಗಳು ಬಿದ್ದು ಕಾರ್ಮಿಕರ ದುರ್ಮರಣ: ಮೂವರ ಶವ ಹೊರಕ್ಕೆ

ವಿಜಯಪುರ: ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರಿಸ್ ನಲ್ಲಿ ಸೋಮವಾರ ಸಂಜೆ ನಡೆದಿದೆ.

ರಾಜೇಶ್ ಮುಖಿಯಾ(25), ರಾಮರಾಜ್ ಮುಖಿಯಾ(29), ಸಂಬೂ ಮುಖಿಯಾ(26) ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ದುರಂತದಲ್ಲಿ ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ. ಅವಶೇಷಗಳಡಿ ಸಿಲುಕಿ 6-7 ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಉಳಿದವರನ್ನು ಹೊರ ತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಧಿಕಾರಿ ಭೂಬಾಲನ್, ಎಸ್.ಪಿ. ಹೃಷಿಕೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಚೀಲಗಳ ರಾಶಿ ಕುಸಿದು ದುರಂತ ಸಂಭವಿಸಿದೆ. ಈವರೆಗೂ ಮೂವರು ಕಾರ್ಮಿಕರ ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular