HomeKarnatakaBIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ವಿಜಯಪುರ: ವಿಜಯಪುರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಿಗ್ಗೆ ಕಾರ್ಖಾನೆ ಕಾರ್ಮಿಕರು ಚಹಾ ಕುಡಿಯಲೆಂದು ಕಾರ್ಖಾನೆಯಿಂದ ಹೊರಬಂದಿದ್ದರು. ಈ ವೇಳೆ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಕಾರ್ಮಿಕರು ಸ್ವಲ್ಪದರಲ್ಲಿಯೇ ಬಚಾವಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 2023ರ ಮಾರ್ಚ್ 4ರಂದು ಕೂಡ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟಗೊಂಡಿತ್ತು. ದುರಂತದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.ಇದೀಗ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular