HomeKarnatakaBREAKING: ವಿಜಯಪುರದಲ್ಲಿ ಘೋರ ದುರಂತ: ತೆರೆದ ಬಾವಿಗೆ ಬಿದ್ದು ಇಬ್ಬರು ಮಕ್ಕಳು, ತಂದೆ ಸಾವು

BREAKING: ವಿಜಯಪುರದಲ್ಲಿ ಘೋರ ದುರಂತ: ತೆರೆದ ಬಾವಿಗೆ ಬಿದ್ದು ಇಬ್ಬರು ಮಕ್ಕಳು, ತಂದೆ ಸಾವು

ವಿಜಯಪುರ: ತೆರೆದ ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮತ್ತು ತಂದೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ.

ಸಾಕ್ಷಿ(15), ರಕ್ಷಿತಾ(10) ಮತ್ತು ತಂದೆ ಸಾಬಣ್ಣ(40) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನ ಬಳಿ ಇದ್ದ ತೆರೆದ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದಾರೆ. ಮಕ್ಕಳನ್ನು ರಕ್ಷಿಸಲು ಬಾವಿಗೆ ಜಿಗಿದ ತಂದೆಯೂ ನೀರು ಪಾಲಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆಯಾಗಿದ್ದು, ಸಾಬಣ್ಣ ಅವರ ಶವ ಪತ್ತೆಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಶುಕ್ರವಾರ ಸಂಜೆ ತೋಟದ ಮನೆ ಬಳಿ ಮಕ್ಕಳು ಬಾವಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ತಂದೆಯೂ ನೀರು ಪಾಲಾಗಿದ್ದಾರೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಮಕ್ಕಳ ಶವಗಳನ್ನು ಹೊರತೆಗೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular