HomeKarnatakaಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಬರ್ಬರ ಹತ್ಯೆ

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಬರ್ಬರ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಓರ್ವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಅಶೋಕ್ ಮಲ್ಲಪ್ಪ ಗಂಟಗಲ್ಲಿ ಮೃತ ರೌಡಿಶೀಟರ್. ಪೆರೋಲ್ ಮೇಲೆ ಇದ್ದ ಅಶೋಕ್ ಮಲ್ಲಪ್ಪ, ಮನೆಯಿಂದ ಚಡಚಣ ಪಟ್ಟಣಕ್ಕೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಫೈರಿಂಗ್ ನಲ್ಲಿ ಅಶೋಕ್ ಬೆನ್ನಿಗೆ 3ಕ್ಕೂ ಹೆಚ್ಚು ಗುಂಡುಗಳು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ರೌಡಿಶೀತರ್ ಪತ್ನಿ ಚಡಚಣ ಪಟ್ಟಣ ಪಂಚಾಯಿತಿ ಸದಸ್ಯೆಗಾದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular