HomeKarnatakaನಿಯಮ ಬಾಹಿರವಾಗಿ 143 ಶಾಲೆ ಆರಂಭಿಸಲು ಅನುಮತಿ: ಅಧಿಕಾರಿ ಅಮಾನತು

ನಿಯಮ ಬಾಹಿರವಾಗಿ 143 ಶಾಲೆ ಆರಂಭಿಸಲು ಅನುಮತಿ: ಅಧಿಕಾರಿ ಅಮಾನತು

ವಿಜಯಪುರ: ಶಾಲೆಗಳಿಗೆ ನಿಯಮಬಾಹಿರ ಅನುಮತಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ 2025 -26 ನೇ ಸಾಲಿನಲ್ಲಿ 143 ಶಾಲೆಗಳನ್ನು ಆರಂಭಿಸಲು ನಿಯಮಬಾಹಿರವಾಗಿ ಅನುಮತಿ ನೀಡಿದ್ದ ಹಿಂದಿನ ಪ್ರಭಾರ ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಡಿಡಿಪಿಐ) ಟಿ.ಎಸ್. ಕೊಲ್ಹಾರ ಅವರನ್ನು ಅಮಾನತು ಮಾಡಲಾಗಿದೆ.

ಟಿ.ಎಸ್. ಕೊಲ್ಹಾರ ಪ್ರಸ್ತುತ ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿಯಾಗಿದ್ದಾರೆ. ಶಿಕ್ಷಣ ಇಲಾಖೆಯ ಧಾರವಾಡ ಅಪರ ಆಯುಕ್ತರ ವರದಿ ಹಿನ್ನೆಲೆಯಲ್ಲಿ ಟಿ.ಎಸ್. ಕೊಲ್ಹಾರ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಗತಿ ಪರಿಶೀಲನಾ ಸಭೆ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ಹಾಗೂ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ (RDA) ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಗರದ ಸಾರ್ವಜನಿಕ ಸೌಲಭ್ಯಗಳು ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಅಧಿಕಾರಿಗಳೊಂದಿಗೆ ಸಚಿವ ಯತೀಂದ್ರ ಸಿದ್ಧರಾಮಯ್ಯ ವಿಸ್ತೃತ ಚರ್ಚೆ ನಡೆಸಿದ್ದಾರೆ.

ರಾಯಚೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ.

ನಗರದಲ್ಲಿ 100% ಕಸ ವಿಂಗಡಣೆ (Segregation) ಕಡ್ಡಾಯಗೊಳಿಸಲು ಸೂಚಿಸಲಾಗಿದೆ. ತಕ್ಷಣವೇ ಕಸ ವಿಂಗಡಣೆ ಯಂತ್ರಗಳು ಹಾಗೂ ಅಗತ್ಯ ಹೊಸ ತ್ಯಾಜ್ಯ ಸಂಗ್ರಹಣೆ ವಾಹನಗಳನ್ನು ಖರೀದಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತಿಳಿಸಿದ್ದಾರೆ.

ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 301 ಪೌರಕಾರ್ಮಿಕರ ಜೊತೆಗೆ, ಅಗತ್ಯವಿರುವ ಬಾಕಿ 138 ಹುದ್ದೆಗಳನ್ನು (ಒಟ್ಟು 439) ಶೀಘ್ರವೇ ಭರ್ತಿ ಮಾಡಲು ಸೂಚಿಸಿದ್ದಾರೆ. ದಿನದ 24 ಗಂಟೆ ನಿರಂತರ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲು ಹಾಗೂ ಬಾಕಿ ನೀರಿನ ಬಿಲ್ ವಸೂಲಿ ಮಾಡಲು ಸೂಚಿಸಿದ್ದಾರೆ.

ಗೃಹ ಬಳಕೆಯ ಒಳಚರಂಡಿ ಜೋಡಣೆ (Household UGD) ಚುರುಕುಗೊಳಿಸಿ, STP ಸಾಮರ್ಥ್ಯವನ್ನು ಪ್ರಸ್ತುತ 33.5 MLD ಯಿಂದ 50 MLD ಗೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶಿಸಿದ್ದಾರೆ.

‘ಅಮೃತ್ 2.0’ ಯೋಜನೆಯಡಿ ₹4.05 ಕೋಟಿ ವೆಚ್ಚದ ಹೊಸ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ರಸ್ತೆ, ಒಳಚರಂಡಿ,ಪಾದಚಾರಿ ರಸ್ತೆ, ನೀರಿನ ಘಟಕ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗಾಗಿ ‘ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ’ಯಡಿ  ₹185 ಕೋಟಿ ಅನುದಾನ ಪ್ರಸ್ತಾವನೆ ಸರ್ಕಾರಕ್ಕೆ ಕಳುಹಿಸಿದ್ದು ಉತ್ತಮ ರೂಪುರೇಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

RDA ನಿವೇಶನಗಳ ಬಾಕಿ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸುವುದು, ಆಶ್ರಯ ಕಾಲೋನಿಗಳ ಅಭಿವೃದ್ಧಿ, ‘ಕಂದಾಯ ಅದಾಲತ್’ ನಡೆಸಿ ತಕ್ಷಣವೇ ಈ-ಖಾತೆ ನೀಡುವುದು ಹಾಗೂ ಸರ್ಕಾರಿ ಜಾಗದಲ್ಲಿನ ಅಕ್ರಮ ನಿರ್ಮಾಣಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೂಕ್ತ ವ್ಯಾಪಾರ ಪರವಾನಗಿ (Trade License) ವಿತರಣೆ, ಸುಸಜ್ಜಿತ ಸಾರ್ವಜನಿಕ ಶೌಚಾಲಯ ನಿರ್ವಹಣೆ ಮತ್ತು ವಾಹನ ದಟ್ಟಣೆ ನಿಯಂತ್ರಣಕ್ಕೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತಿಳಿಸಿದ್ದು, ನಗರದ ಕುಂದುಕೊರತೆ ಆಲಿಸಲು ಹಾಗೂ ಕಾಮಗಾರಿಗಳ ಪರಿಶೀಲನೆಗೆ ವರ್ಷಕ್ಕೆ ಕನಿಷ್ಠ 9 ಬಾರಿಯಾದರೂ ಸಭೆ ನಡೆಸುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ  ಎ. ವಸಂತ ಕುಮಾರ್, RDA ಅಧ್ಯಕ್ಷ ರಾಜಶೇಖರ್ ರಾಮಸ್ವಾಮಿ, ಜಿಲ್ಲಾಧಿಕಾರಿ ಪೂವಿತಾ ಎಸ್, ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular