HomeLatest Newsಮಲೆ ಮಹದೇಶ್ವರ, ಕಲಬುರಗಿಯಂತೆಯೇ ವಿಜಯಪುರದಲ್ಲಿಯೂ ಸಚಿವ ಸಂಪುಟ ಸಭೆ ನಡೆಯಲಿದೆ: ಸಚಿವ ಎಂ.ಬಿ.ಪಾಟೀಲ್

ಮಲೆ ಮಹದೇಶ್ವರ, ಕಲಬುರಗಿಯಂತೆಯೇ ವಿಜಯಪುರದಲ್ಲಿಯೂ ಸಚಿವ ಸಂಪುಟ ಸಭೆ ನಡೆಯಲಿದೆ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಮಲೆ ಮಹದೇಶ್ವರ ಬೆಟ್ಟ, ಕಲಬುರಗಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆದಂತೆ ಮುಂದಿನ ದಿನಗಳಲ್ಲಿ ವಿಜಯಪುರದಲ್ಲಿಯೂ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ವಿಜಯಪುರದಲ್ಲಿಯೂ ಸಚಿವ ಸಂಪುಟ ಸಭೆ ನಡೆಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುಷಿಯಿಂದ ಸಮ್ಮತಿ ಸೂಚಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ವಿಜಯಪುರದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಸರ್ಕಾರದಿಂದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರೋತ್ಸಾಹ ಸಿಗುತ್ತಿದೆ. ಇಲ್ಲಿನ ಯೋಜನೆಗಳಿಗೆ ವೇಗ ಸಿಗುತ್ತಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular