BREAKING: 9ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವು: ಶಾಲೆ ಪಕ್ಕದಲ್ಲೇ ಶವ ಪತ್ತೆ

ವಿಜಯಪುರ: 9 ನೇ ತರಗತಿಯ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಖಾಸಗಿ ಶಾಲೆಯ ಪಕ್ಕದ ಜಮೀನಿಅಲ್ಲಿ ಮರದ ಕೆಳಗೆ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮಡಿವಾಳಪ್ಪ ಚಬನೂರ (15) ಮೃತ ವಿದ್ಯಾರ್ಥಿ.

ಮೃತ ವಿದ್ಯಾರ್ಥಿ ಸಂದಗಿ ತಾಲೂಕಿನ ಬೋರಗಿ ಗ್ರಾಮದ ನಿವಾಸಿ. ಮಡಿವಾಳಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಪೋಷಕರಿಗೆ ತಿಳಿಸಿದ್ದಾರೆ. ಆದರೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read