ವಿಜಯಪುರ: ಯುವಕನೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಶಿಕಾರಿ ಖಾನ ಪ್ರದೇಶದಲ್ಲಿ ನಡೆದಿದೆ.
ಅಶನಾಮ್ ಪ್ರಕಾಶ್ ಮಿರ್ಚಿ (22) ಆತ್ಮಹತ್ಯೆಗೆ ಶರಣಾದ ಯುವಕ. ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಕಾಶ್ ಮಿರ್ಚಿ ಅವರ ಮಗ. ತಂದೆಯ ಹೆಸರಲ್ಲಿ ಪರವಾನಗಿ ಹೊಂದಿದ್ದ ಪಿಸ್ತೂಲ್ ನಿಂದ ಮನೆಯ ರೂಮ್ ನಲ್ಲಿಯೇ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ.
ತಕ್ಷಣ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಅಶನಾಮ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.