ತುಂಬು ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ಗೆ ಡಿಕ್ಕಿ; ತಾಯಿ, ಹೊಟ್ಟೆಯಲ್ಲಿಯೇ ಮಗು ದುರ್ಮರಣ

ವಿಜಯಪುರ: ಗರ್ಭಿಣಿಯನ್ನು ಹೆರಿಗೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ.

ಭಾಗ್ಯಶ್ರೀ ಮೃತ ಗರ್ಭಿಣಿ. ಒಂದುವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಭಾಗ್ಯಶ್ರೀಗೆ ಮೊದಲ ಹೆರಿಗಾಗಿ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಮೊದಲಿಗೆ ಭಾಗ್ಯಶ್ರೀಯನ್ನು ತಾಳಿಕೋಟೆ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯದಲ್ಲಿ ಏರುಪೇರಾದ ಕಾರಣಕ್ಕೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಭಾಗ್ಯಶ್ರೀಯನ್ನು ಆಂಬುಲೆನ್ಸ್ ನಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬುಲೆನ್ಸ್, ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗರ್ಭಿಣಿ ಹಾಗೂ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದೆ. ಆಂಬುಲೆನ್ಸ್ ನಲ್ಲಿದ್ದ ಸ್ಟಾಫ್ ನರ್ಸ್ ಹಾಗೂ ಸಹಾಯಕನಿಗೂ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಯಿ ಹಾಗೂ ಮಗು ಸಾವನ್ನಪ್ಪುತ್ತಿದ್ದಂತೆ ಸಮುದಾಯ ಆಸ್ಪತ್ರೆಗೆ ಧಾವಿಸಿದ ಕುಟುಂಬ ಹಾಗೂ ಪೋಷಕರು ವೈದ್ಯಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read