HomeKarnatakaBREAKING: ಕ್ರಿಕೆಟ್ ಗೆದ್ದ ಸಂಭ್ರಮದಲ್ಲಿದ್ದಾಗಲೇ ದುರಂತ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಸಾವು

BREAKING: ಕ್ರಿಕೆಟ್ ಗೆದ್ದ ಸಂಭ್ರಮದಲ್ಲಿದ್ದಾಗಲೇ ದುರಂತ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಸಾವು

ವಿಜಯಪುರ: ಕ್ರಿಕೆಟ್ ಪಂದ್ಯಾವಳಿ ಗೆದ್ದ ಸಂಭ್ರದಲ್ಲಿದ್ದಾಗಲೇ ಪಟ್ಟಣ ಪಂಚಾಯತ್ ಸದಸ್ಯರೊಬ್ಬರು ಎದೆನೋವಿನಿಂದ ಕುಸಿದು ಬಿದ್ದು ಮೈದಾನದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಮತ್ತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇತ್ತ ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ, ಕಿರುತೆರೆಯ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಬೆನ್ನಲ್ಲೇ ಅತ್ತ ವಿಜಯಪುರದಲ್ಲಿ ಪಟ್ಟಣ ಪಂಚಾಯತ್ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ತೌಸಿಪ್ ಗಿರಗಾಂವಿ ಮೃತ ಪಟ್ಟಣ ಪಂಚಾಯತ್ ಸದಸ್ಯ. ಕ್ರಿಕೆಟ್ ಪಂದ್ಯಾವಳಿ ಗೆದ್ದ ಹಿನ್ನೆಲೆಯಲ್ಲಿ ಮೈದಾನದಲ್ಲಿ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ವೇಳೆ ತೌಸಿಫ್ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಮೈದಾನದಲ್ಲಿಯೇ ಕುಸಿದು ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದರು. ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತೌಸಿಫ್ ಕೊಲ್ಹಾರ ಪಟ್ಟಣ ಪಂಚಾಅಯರ್ 16ನೇ ವಾರ್ಡ್ ಸದಸ್ಯರಾಗಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular