HomeKarnatakaಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ ಇಟ್ಟ ಇಬ್ಬರು ಅಧಿಕಾರಿಗಳು: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ ಇಟ್ಟ ಇಬ್ಬರು ಅಧಿಕಾರಿಗಳು: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ವಿಜಯಪುರ: ಬಿಲ್ ಪಾವತಿಸಲು ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ.

ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ ಇನ್ನೊಂದು ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೂಡಗಿ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ರೂಡಗಿ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಲಂಚಕೋರರನ್ನ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಇಬ್ಬರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular