HomeKarnatakaಟ್ರ್ಯಾಕ್ಟರ್-ಲಾರಿ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಟ್ರ್ಯಾಕ್ಟರ್-ಲಾರಿ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾವೆ.ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ನಡೆದಿದೆ.

ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ಟ್ರ್ಯಾಕ್ಟರ್ ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದೆ. ಲಾರಿ ಗುದ್ದಿದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular