HomeKarnatakaಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ವಿಶೇಷ ಅನುದಾನಕ್ಕೆ ವಿಜಯೇಂದ್ರ ಆಗ್ರಹ

ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ವಿಶೇಷ ಅನುದಾನಕ್ಕೆ ವಿಜಯೇಂದ್ರ ಆಗ್ರಹ

ಶಿವಮೊಗ್ಗ: ಮಂಗಳೂರಿನಲ್ಲಿ ಕೇವಲ ಕ್ಯಾಬಿನೆಟ್ ಸಭೆ ಮಾಡಿ ಫೋಟೊ ತೆಗೆಸಿಕೊಳ್ಳುವ ಕೆಲಸ ಆಗದಿರಲಿ. ಕರಾವಳಿ ಭಾಗದ ಅಭಿವೃದ್ಧಿಗೆ ಮತ್ತು ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಅಭಿವೃದ್ಧಿಗಾಗಿ ಎಲ್ಲ 224 ಕ್ಷೇತ್ರಗಳಿಗೆ 200 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದು ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ವಿದ್ಯುತ್, ನೀರು ಇಲ್ಲದೇ ಬೆಳೆ ನಾಶವಾಗುತ್ತಿದೆ. ರೈತರು ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಭರಿತರಾಗಿದ್ದಾರೆ. ನಾವು ಈಚೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಸಿದ್ದೇವೆ. ಕುಂಭಕರ್ಣ ನಿದ್ರೆಯಲ್ಲಿದ್ದ ಈ ಸರ್ಕಾರನ್ನು ಬಡಿದೆಬ್ಬಿಸುವ ಕೆಲಸವನ್ನು ಬಿಜೆಪಿ, ಹೋರಾಟದ ಮೂಲಕ ಮಾಡಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಮುಖ್ಯಮಂತ್ರಿಗಳು ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದರು. ಈಗ ಸ್ವಲ್ಪ ಜ್ಞಾನೋದಯವಾಗಿ ರಾಜ್ಯದ ಬೇರೆಬೇರೆ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಕರಾವಳಿ ಭಾಗಕ್ಕೆ ಕಾಂಗ್ರೆಸ್ ಸರ್ಕಾರದ ಶೂನ್ಯ ಕೊಡುಗೆ

ಮಂಗಳೂರಿಗೆ ಮುಖ್ಯಮಂತ್ರಿಗಳು ಭೇಟಿ ಕೊಡುತ್ತಿದ್ದಾರೆ. ಕಳೆದ 3 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರವು ಕರಾವಳಿ ಭಾಗಕ್ಕೆ ಶೂನ್ಯ ಕೊಡುಗೆ ನೀಡಿದೆ. ಒಂದು ಬಿಡಿಗಾಸನ್ನೂ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು. ಹಿಂದೆ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರವು 18ರಿಂದ 20 ಸಾವಿರ ಕೋಟಿ ರೂಪಾಯಿಗಳನ್ನು ಕರಾವಳಿ ಭಾಗದ ಅಭಿವೃದ್ಧಿಗೆ ನೀಡಿತ್ತು ಎಂದು ಗಮನ ಸೆಳೆದರು.

ಪ್ರತಿ ಕ್ಷೇತ್ರಕ್ಕೆ 200 ಕೋಟಿ ವಿಶೇಷ ಅನುದಾನಕ್ಕೆ ಆಗ್ರಹ

ಕೇವಲ ಕ್ಯಾಬಿನೆಟ್ ಸಭೆ ಮಾಡಿ ಫೋಟೊ ತೆಗೆಸಿಕೊಳ್ಳುವ ಕೆಲಸ ಆಗದಿರಲಿ. ಕರಾವಳಿ ಭಾಗದ ಅಭಿವೃದ್ಧಿಗೆ ಮತ್ತು ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಕೊಡಿ. ರಸ್ತೆ ಅಭಿವೃದ್ಧಿಗಾಗಿ ಎಲ್ಲ 224 ಕ್ಷೇತ್ರಗಳಿಗೆ 200 ಕೋಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕಸ್ತೂರಿರಂಗನ್ ವರದಿ ನಿಮ್ಮದೇ ಯುಪಿಎ ಸರ್ಕಾರದ ಕೊಡುಗೆ

ಕಸ್ತೂರಿರಂಗನ್ ವರದಿ ಬಗ್ಗೆ ಸಂವಾದಕ್ಕೆ ಮುಖ್ಯಮಂತ್ರಿಗಳು ಬರಲಿದ್ದಾರೆ. ಕಸ್ತೂರಿರಂಗನ್ ವರದಿ ನಿಮ್ಮದೇ ಯುಪಿಎ ಸರ್ಕಾರದ ಕೊಡುಗೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಾಡ್ಗೀಳ್ ವರದಿ, ಕಸ್ತೂರಿರಂಗನ್ ವರದಿ ಪಡೆದಿದ್ದಾರೆ. ಕಾಡಂಚಿನ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಲಜ್ಜೆಗೆಟ್ಟ ರಾಜಕಾರಣ ಮಾಡುವುದು ಬಿಡಿ; ಕಾಡಂಚಿನ ರೈತರ ರಕ್ಷಣೆ ಮಾಡಿ. ಸದನದಲ್ಲಿ ಸಮರ್ಪಕ ಚರ್ಚೆ ಮಾಡೋಣ. ಕಪಟ ನಾಟಕ ಬೇಡ; ಜನರ ದಿಕ್ಕು ತಪ್ಪಿಸದಿರಿ ಎಂದು ಎಚ್ಚರಿಸಿದರು.

ಹೋರಾಟದ ಫಲವಾಗಿ ವಿಶೇಷ ಅಧಿವೇಶನ

ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿದ್ದಾರೆ. ಅಲ್ಲಿ ಬರಗಾಲದ ಸಮಸ್ಯೆ, ಕಸ್ತೂರಿರಂಗನ್ ವರದಿ ಬಗ್ಗೆ ಸಮಗ್ರ ಚರ್ಚೆ ಮಾಡಲಿದ್ದೇವೆ ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular