HomeLatest Newsವಿಜಯೇಂದ್ರಗೆ ಬೆಂಗಳೂರಿನ ಮೇಲೆ ಹಿಡಿತವಿಲ್ಲ: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅಸಮಾಧಾನ

ವಿಜಯೇಂದ್ರಗೆ ಬೆಂಗಳೂರಿನ ಮೇಲೆ ಹಿಡಿತವಿಲ್ಲ: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅಸಮಾಧಾನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬೆಂಗಳೂರಿನ ಮೇಲೆ ಹಿಡಿತವಿಲ್ಲ ಎಂದು ಪಕ್ಷದ ಶಾಸಕ ಎಸ್.ಆರ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಬಿಜೆಪಿ ವತಿಯಿಂದ ರಚಿಸಿದ ಉಸ್ತುವಾರಿ ಸಮಿತಿಗೆ ತಮ್ಮನ್ನು ಪರಿಗಣಿಸದಿರುವ ಬಗ್ಗೆ ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನನ್ನು ಎಲ್ಲೇ ಬಿಟ್ಟರೂ ಪಕ್ಷದ ಸಂಘಟನೆ ಮಾಡುವ ಶಕ್ತಿ ಇದೆ. ಬೆಂಗಳೂರನ್ನು ಗೆದ್ದರೆ ಇಡೀ ರಾಜ್ಯ ಗೆದ್ದಂತೆಯೇ ಸರಿ. ಜಿಬಿಎ ಉಸ್ತುವಾರಿ ಸಮಿತಿ ರಚಿಸುವಾಗ ನನ್ನನ್ನು ಪರಿಗಣಿಸದೆ ಯಲಹಂಕ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದಾರೆ. 47 ವರ್ಷಗಳಿಂದ ನಾನು ಪಕ್ಷದಲ್ಲಿ ದುಡಿದಿದ್ದೇನೆ. ನಂದೀಶ್ ರೆಡ್ಡಿ ಕೊಟ್ಟ ಪತ್ರಕ್ಕೆ ಸಹಿ ಹಾಕಿದ್ದಾರಂತೆ. ವಿಜಯೇಂದ್ರ ಅವರಿಗೆ ಬೆಂಗಳೂರಿನ ಮೇಲೆ ಹಿಡಿತವಿಲ್ಲ. ಪಕ್ಷದಲ್ಲಿ ಸೋತವರಿಗೆ ಹುದ್ದೆ ನೀಡಿ ಹಿರಿಯರಿಗೆ ಮುಜುಗರ ತಂದಿದ್ದಾರೆ. ಚುನಾವಣೆಯಲ್ಲಿ ಸೋತರೆ ನಮ್ಮ ತಲೆಗೆ ಕಟ್ಟಬೇಡಿ, ಉಸ್ತುವಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular