HomeKarnatakaವಿಜಯೇಂದ್ರ ನನಗೆ ಯಾವುದೇ ಲಂಚದ ಆಮಿಷವೊಡ್ಡಿಲ್ಲ: ಅನ್ವರ್ ಮಾಣಿಪ್ಪಾಡಿ ಸ್ಪಷ್ಟನೆ

ವಿಜಯೇಂದ್ರ ನನಗೆ ಯಾವುದೇ ಲಂಚದ ಆಮಿಷವೊಡ್ಡಿಲ್ಲ: ಅನ್ವರ್ ಮಾಣಿಪ್ಪಾಡಿ ಸ್ಪಷ್ಟನೆ

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿ ಮೋದಿಯವರಿಗೆ ನೇರವಾಗಿ ಪತ್ರ ಬರೆದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅನ್ವರ್ ಮಾಣಿಪ್ಪಾಡಿ ಅವರು, ವಿಜಯೇಂದ್ರ ನನಗೆ ಯಾವುದೇ ಆಮಿಷವೊಡ್ಡಿರಲಿಲ್ಲ. ಅಂದು ವಿಜಯೇಂದ್ರ ಯಾರು ಎಂಬುದೇ ನನಗೆ ಗೊತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಅನ್ವರ್ ಮಾಡಿ ತಿಳಿಸಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ ವಿಚಾರವಾಗಿ ಕಾಂಗ್ರೆಸ್ ನವರು ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿದ್ದರು. ಆಗ ವಿಜಯೇಂದ್ರ ಯಾರು ಎಂಬುದು ನನಗೆ ಗೊತ್ತಿರಲಿಲ್ಲ. ಅವರು ನಮ್ಮ ಮನೆಗೆ ಬಂದಿರಲಿಲ್ಲ ಎಂದು ಅ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular