ಶ್ರೀರಾಮುಲು -ಜನಾರ್ದನ ರೆಡ್ಡಿ ಒಂದುಗೂಡಿಸಲು ಇಬ್ಬರ ಕೈ ಮೇಲೆತ್ತಿದ ವಿಜಯೇಂದ್ರ

ಕೊಪ್ಪಳ: ಮಾಜಿ ಸಚಿವರಾದ ಬಿ. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅವರನ್ನು ಒಂದುಗೂಡಿಸಲು ಬಿಜೆಪಿ ಭಾರಿ ಕಸರತ್ತು ನಡೆಸಿದೆ.

ಕೊಪ್ಪಳದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅವರ ಕೈ ಹಿಡಿದು ಮೇಲೆತ್ತಿದ್ದಾರೆ. ಪರಸ್ಪರ ದೂರವಾಗಿರುವ ಉಭಯ ನಾಯಕರನ್ನು ಒಂದುಗೂಡಿಸುವ ಪ್ರಯತ್ನಗಳು ಪಕ್ಷದಲ್ಲಿ ನಡೆದಿವೆ.

ನಮ್ಮ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ. ನಮ್ಮ ನಡುವೆ ಯಾರ ಮಧ್ಯಸ್ಥಿಕೆಯೂ ಬೇಕಿಲ್ಲ ಎಂದು ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ಇಬ್ಬರನ್ನು ಕರೆಸಿಕೊಂಡು ಒಂದಾಗಿ ಹೋಗುವಂತೆ ಸೂಚಿಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಇದರ ನಡುವೆಯೇ ಕೊಪ್ಪಳದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ಬಿ.ವೈ. ವಿಜಯೇಂದ್ರ ಇಬ್ಬರ ಕೈಹಿಡಿದು ಮೇಲೆತ್ತಿದ್ದು, ಈ ವೇಳೆ ಕಾರ್ಯಕರ್ತರು ಹರ್ಷೋದ್ಗಾರ ಮೊಳಗಿಸಿದ್ದಾರೆ. ನಮ್ಮ ನಡುವೆ ಯಾವ ಭಿನ್ನಾಭಿಪ್ರಾಯವಿಲ್ಲ, ನಾವು ಚಿಕ್ಕ ವಯಸ್ಸಿನಿಂದಲೇ ಸ್ನೇಹಿತರು ಎಂದು ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read