ಯತ್ನಾಳ್ ಆಕ್ರೋಶದ ಬೆನ್ನಲ್ಲೇ ಬಿಜೆಪಿ ತಂಡ ಪುನರ್ ರಚಿಸಿದ ವಿಜಯೇಂದ್ರ

ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಕ್ರೋಶದ ಬೆನ್ನಲ್ಲೇ ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಶೀಲನಾ ತಂಡವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುನರ್ ರಚನೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ಪಹಣಿಯಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎನ್ನುವ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಶೀಲನಾ ತಂಡವನ್ನು ರಚಿಸಲಾಗಿತ್ತು. ಈ ತಂಡದಲ್ಲಿ ವಿಜಯಪುರ ನಗರ ಶಾಸಕ ಯತ್ನಾಳ್ ಮತ್ತು ಸಂಸದ ರಮೇಶ ಜಿಗಜಿಣಗಿ ಅವರನ್ನು ಕೈಬಿಟ್ಟಿದ್ದಕ್ಕೆ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ವಿಜಯೇಂದ್ರ ಅವರು ರಮೇಶ್ ಜಿಗಜಿಣಗಿ ಮತ್ತು ಯತ್ನಾಳ್ ಅವರನ್ನು ಒಳಗೊಂಡಂತೆ ಸಮಿತಿಯನ್ನು ಪುನರ್ ರಚನೆ ಮಾಡಿದ್ದಾರೆ. ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ನಾಳೆ ವಿಜಯಪುರಕ್ಕೆ ತೆರಳಿ ಪರಿಶೀಲನೆ ನಡೆಸಲಿದೆ. ಈ ತಂಡದಲ್ಲಿ ಶಾಸಕರಾದ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಪಕ್ಷದ ನಾಯಕರಾದ ಅರುಣ ಶಹಾಪುರ, ಕಲ್ಮರುಡಪ್ಪ ಅವರೂ ಇದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read