HomeKarnatakaದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ನಿವಾಸಕ್ಕೆ ವಿಜಯೇಂದ್ರ ಭೇಟಿ: ಕಾರ್ಯಕರ್ತರೊಂದಿಗೆ ಚರ್ಚೆ

ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ನಿವಾಸಕ್ಕೆ ವಿಜಯೇಂದ್ರ ಭೇಟಿ: ಕಾರ್ಯಕರ್ತರೊಂದಿಗೆ ಚರ್ಚೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಅವರೊಂದಿಗೆ ಹಾಗೂ ಪ್ರಚಾರ ಕಾರ್ಯದಲ್ಲಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಎಲ್ಲ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಹೊಸ ಹುರುಪು, ಹುಮ್ಮಸ್ಸು ತುಂಬುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಪಕ್ಷ ಸಂಘಟನೆಗಾಗಿ ಶ್ರಮ ವಹಿಸುವ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರ ಬದ್ಧತೆ ಹಾಗೂ ಪರಿಶ್ರಮ ಅಮೂಲ್ಯವಾದುದು. ಚುನಾವಣೆಯ ಫಲಿತಾಂಶ ಏನೇ ಇರಲಿ, ನಮ್ಮ ಕಾರ್ಯಕರ್ತರ ನಿಸ್ವಾರ್ಥ ಸೇವೆಗೆ ಬೆಲೆ ಕಟ್ಟಲಾಗದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಹಜ, ಈಗಿನ ಹಿನ್ನಡೆಯಿಂದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕೆತೆಯಿಲ್ಲ. ನಾವೆಲ್ಲರೂ ಇನ್ನೂ ಹೆಚ್ಚು ಶ್ರಮವಹಿಸಿ ಸಂಘಟನೆ ಮಾಡೋಣ, ಜನರಿಗಾಗಿ, ಜನರ ನಡುವೆಯೇ ಕೆಲಸ ಮಾಡೋಣ, ಕಮಲ ಅರಳುವ ಸಮಯ ನಿಶ್ಚಿತವಾಗಿ ಬರಲಿದೆ, ನಿಮ್ಮೊಂದಿಗೆ ಸದಾ ಜೊತೆಯಾಗಿ ನಿಲ್ಲುತ್ತೇನೆ. ಪಕ್ಷದ ಸಿದ್ಧಾಂತ ಹಾಗೂ ಸಂಘಟನೆಯೇ ನಮ್ಮ ಬಲ. ನಾವೆಲ್ಲರೂ ಒಗ್ಗೂಡಿ, ಹೊಸ ಹುಮ್ಮಸ್ಸು ಮತ್ತು ಚೈತನ್ಯದೊಂದಿಗೆ ಮುನ್ನಡೆಯೋಣ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರೇಣುಕಾಚಾರ್ಯ, ರಾಮಚಂದ್ರ ಮೊದಲಾದವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular