BREAKING: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ವಿಜಯೇಂದ್ರ ಗುಡುಗು

ಶಿವಮೊಗ್ಗ: ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಹಾಗೂ ವಿಜಯೇಂದ್ರ ಅವರನ್ನು ಡಿಸಿಎಂ ಮಾಡಲು ದೆಹಲಿಗೆ ಅಮಿತ್ ಶಾ ಭೇಟಿಗೆ ಬಿಜೆಪಿ ನಿಯೋಗ ಹೋಗಲಿದೆ ಎಂಬ ಶಸಾಕ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ವೈ.ವಿಜಯೇಂದ್ರ, ಡಿಕೆಶಿ ಅವರನ್ನು ಬಿಜೆಪಿಗೆ ಸೇರಿಸಲು ಅಮಿತ್ ಶಾ ಭೇಟಿ ಮಾಡಿಸಿದ್ದ ಎಂಬ ಯತ್ನಾಳ್ ಸರಿಯಲ್ಲ. ಹೊಂದಾಣಿಕೆ ರಾಜಕಾರಣ ಎಂದು ಆರೋಪ ಮಾಡುತ್ತಿರುವ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಗುಡುಗಿದ್ದಾರೆ.

ಯತ್ನಾಳ್ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಬೇಕೋ ಅಥವಾ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಬೇಕೋ ಎಂಬ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಬೇಕು ಎಂದುಕೊಂಡಿದ್ದೇನೆ. ಆದರೆ ಯತ್ನಾಳ್ ನನಗೆ ಡಿಸಿಎಂ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಅಧಿಕಾರಕ್ಕಾಗಿ ಸಿಎಂ ಹಾಗೂ ಡಿಸಿಎಂ ನಡುವೆ ಕಿತ್ತಾಟ ನಡೆಯುತ್ತಿದೆ. ಅಧಿವೇಶನದಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿಲ್ಲ. ರಾಜ್ಯದ ಜನರಿಗೆ ಕೃಷಿ ಸಚಿವರು ಯಾರೆಂಬುದೇ ಗೊತ್ತಿಲ್ಲದ ಸ್ಥಿತಿಯಿದೆ. ಕಾಟಾಚಾರಕ್ಕಾಗಿ ಅಧಿವೇಶನ ನಡೆಯುತ್ತಿದೆ. ಬೆಳಗಾವಿ ಅಧಿವೇಶನ ಯಾವ ಪುರುಷಾರ್ಥಕ್ಕೆ ಎಂದು ನಾನು ಈ ಹಿಂದೆ ಕೇಳಿದ್ದೆ. ಕುರ್ಚಿ ಕಿತ್ತಾಟ ಕುಗಿದ ಬಳಿಕ ಅಧಿವೇಶನ ನಡೆಸುವಂತೆಯೂ ಸಲಹೆ ನೀಡಿದ್ದೆ ಎಂದಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read