HomeKarnatakaBIG NEWS: ರೇಟ್ ಫಿಕ್ಸ್ ಆಗಿದೆ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗಗಲ್ಲ: ಬಿ.ವೈ.ವಿಜಯೇಂದ್ರ ವ್ಯಂಗ್ಯ

BIG NEWS: ರೇಟ್ ಫಿಕ್ಸ್ ಆಗಿದೆ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗಗಲ್ಲ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ ಆಗಿದೆ. ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಮಲ್ಲೇಶ್ವರಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ, ಬರ ಇದೆ ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿ ನೀಡಿದ ಹೇಳಿಕೆ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ. ನಿನ್ನೆ ಈ ನಾಡಿನ ದೊರೆ, ಮುಖ್ಯಮಂತ್ರಿ ಒಂದು ಹೇಳಿಕೆ ಕೊಟ್ಟಿದ್ದಾರೆ. ಭೀಕರ ಬರಗಾಲದ ಮುನ್ಸೂಚನೆ ವಿಚಾರವನ್ನು ಸಂಪುಟದಲ್ಲಿ ಚರ್ಚಿಸಿ ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ರೈತರು ಬೆಳೆ ಬೆಳೆಯದಿರಿ ಎಂದು ಸ್ವತಃ ಮುಖ್ಯಮಂತ್ರಿ ಹೇಳಿದ್ದು ಬಹಳ ಆಶ್ಚರ್ಯ ಮಾತ್ರವಲ್ಲದೇ ಅತ್ಯಂತ ನೋವನ್ನು ತಂದಿದೆ. ನಾವೇನೇ ಹೇಳಿಕೆ ನೀಡಿದರೂ ಪ್ರಬುದ್ಧತೆಯಿಂದ ಮಾತನಾಡಬೇಕು ಎಂದರು.

ಇಡೀ ದೇಶದಲ್ಲಿ ಬರಗಾಲದ ಛಾಯೆ ಮೂಡಿದೆ. ಪ್ರಕೃತಿ ಮುನಿಸಿಕೊಂಡ ಸಂದರ್ಭದಲ್ಲಿ ರಾಜ್ಯದ ರೈತರಿಗೆ ಅಭಯ, ಭರವಸೆಯನ್ನು ಸರಕಾರ ನೀಡಬೇಕಿತ್ತು. ಮುಂದಿನ 15-20 ದಿನ ಮಳೆ ಬೀಳುವ ಆಶಾಭಾವ ಇದೆ. ಮುಖ್ಯಮಂತ್ರಿ ಹೇಳಿದರೆಂದು ಬಿತ್ತನೆಯೇ ಮಾಡದೇ ಇದ್ದರೆ ಯಾರು ಹೊಣೆಗಾರರು? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೇ. 50- 60 ಮಳೆ ಕಡಿಮೆ ಇರುವಾಗ ರಾಜ್ಯ ಸರಕಾರದ ಆದ್ಯತೆ ಏನು? ಇವರೇನಾದರೂ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಿದ್ದಾರಾ? ರೈತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಸಂಬಂಧಿಸಿ ಅನುದಾನ ಬಿಡುಗಡೆ ಮಾಡಿದ್ದಾರಾ? ಬರಗಾಲದ ಮುನ್ಸೂಚನೆ ವಿಚಾರ ರಾತ್ರೋರಾತ್ರಿ ಜ್ಞಾನೋದಯ ಆಗಿದೆಯೇ? ಯಾಕೆ ಈ ರೀತಿ ಕಪಟ ನಾಟಕ ಆಡುತ್ತಿದ್ದೀರಿ? ಮುಖ್ಯಮಂತ್ರಿ ರೈತ ಪರವಾಗಿಲ್ಲದೇ ರಿಯಲ್ ಎಸ್ಟೇಟ್ ಪರ ಆದರೆ ರಾಜ್ಯದ ಹಣೆಬರಹ ಇದೇ ಆಗುತ್ತದೆ ಎಂದು ಆಕ್ಷೇಪಿಸಿದರು.

ರಾಜ್ಯದಲ್ಲಿ ರೈತರುಗೆ ನೀರಿಲ್ಲದಿರುವಾಗ ನಮ್ಮ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ದುಸ್ಸಾಹಸಕ್ಕೆ ಯಾಕೆ ಕೈ ಹಾಕಿದ್ದೀರಿ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ರೈತರಿಗೆ ಕೊಡಬೇಕಾದ ಯೋಜನೆ, ಆಡಳಿತ ಸನ್ನದ್ಧತೆ ಕಡೆಗೆ ಗಮನಿಸದೇ ಮುಖ್ಯಮಂತ್ರಿ ಕೈಚೆಲ್ಲಿ ಕೂತರೆ ಹೇಗೆ? ಎಸ್‍ಐಆರ್ ಇರುವ ಕಾರಣ ಆಗಸ್ಟ್ ಮಧ್ಯದಲ್ಲಿ ಮುಂಗಾರು ಅಧಿವೇಶನ ಮಾಡುವುದಾಗಿ ಹೇಳಿದ್ದಾರೆ. ಶಾಸಕರು ಮನೆ ಮನೆಗೆ ತೆರಳಿ ಎಸ್‍ಐಆರ್ ಮಾಡುತ್ತಾರಾ? ಇದೇ ಕಾರಣಕ್ಕೆ ಅಧಿವೇಶನ ಮುಂದೂಡುತ್ತಿದ್ದಾರೆ. ಸಿದ್ದರಾಮಯ್ಯ ಅವರದ್ದು ಪೂರ್ಣ ಸಂಪುಟ ಇದ್ದರೂ ನೆರೆ ಬಂದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿರಲಿಲ್ಲ ಎಂದು ದೂರಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular