HomeLatest Newsಎಲ್ಲ ವರ್ಗದ ಜನರ ಹಿತ ಕಾಯುವಿರೆಂಬ ನಿರೀಕ್ಷೆ: ನೂತನ ಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ರಾಜ್ಯಾಧ್ಯಕ್ಷ...

ಎಲ್ಲ ವರ್ಗದ ಜನರ ಹಿತ ಕಾಯುವಿರೆಂಬ ನಿರೀಕ್ಷೆ: ನೂತನ ಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿನಂದನೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ನೂತನ ಸಿಎಂ ಅವರಿಗೆ ವಿಪಕ್ಷ ನಾಯಕರು, ರಾಜಕೀಯ ಮುಖಂಡರ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.

ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಭ ಕೋರೊದ್ದಾರೆ. ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಸಮಗ್ರ ಅಭಿವೃದ್ಧಿಗೆ ನಿಮ್ಮ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಿಸುವೆನೆಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ರೈತರು, ಕಾರ್ಮಿಕರು, ಬಡವರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ವರ್ಗದ ಜನರ ಹಿತ ಕಾಯುವಿರೆಂಬ ನಿರೀಕ್ಷೆ ನಾಡಿನ ಜನರದ್ದಾಗಿದೆ. ತಾರತಮ್ಯವಿಲ್ಲದ ಶುದ್ಧ ಆಡಳಿತ ತತ್ವಕ್ಕೆ ಬದ್ಧರಾಗಿ ನಡೆದುಕೊಳ್ಳುವಿರೆಂದು ಬಯಸುವೆ. ರಾಜ್ಯ ನೂತನ ಸಚಿವ ಸಂಪುಟದ ಎಲ್ಲ ಸಚಿವರಿಗೂ ಶುಭ ಹಾರೈಸುವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular