HomeLatest NewsBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಅಧಿಕಾರದ ಮದ: ನನ್ನ ವಿರುದ್ಧ ಮಾತನಾಡುವಾಗ ನಾಲಿಗೆ ಬಿಗಿ...

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಅಧಿಕಾರದ ಮದ: ನನ್ನ ವಿರುದ್ಧ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ವಿಜಯೇಂದ್ರ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವೆ ಮಾತಿನ ಸಮರ ಜೋರಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿದೆ. ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ವಿಜಯೇಂದ್ರ ವಿರುದ್ಧ ಗುಡುಗಿದ್ದ ಡಿ.ಕೆ.ಶಿವಕುಮಾರ್, ಕಲೆಕ್ಷನ್ ಕಿಂಗ್ ಎಂದರೆ ವಿಜಯೇಂದ್ರ. ತಪ್ಪಿಸಿಕೊಂಡು ಓಡಾಡೋದಲ್ಲ ಸದನದಲ್ಲಿ ಬಂದು ಮಾತನಾಡಲಿ ಎಂದು ಹೇಳಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೆರಳಿ ಕೆಂಡವಾಗಿರುವ ವಿಜಯೇಂದ್ರ ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡ್ದ ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರದ ಮದ. ಅದು ಹೀಗೆ ಮಾತನಾಡಿಸುತ್ತಿದೆ. ಯಾರಿಗೋ ದಬ್ಬಾಳಿಕೆ ಮಾಡಿದಂತೆ ನನಗೆ ಮಾಡೋಕೆ ಬರಬೇಡಿ. ನಾವು ತಪ್ಪಿಸಿಕೊಂಡು ಓಡಾಡುತ್ತಿಲ್ಲ. ವಿಪಕ್ಷದವರ ಪ್ರಶ್ನೆಗಳಿಗೆ ನಿಮಗೆ ತಾಕತ್ತಿದ್ದರೆ ಸದನದಲ್ಲಿ ಉತ್ತರ ಕೊಡಿ. ಈ ರಾಜ್ಯದ ಇತಿಹಾಸದಲ್ಲಿ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಅದು ಡಿ.ಕೆ.ಶಿವಕುಮಾರ್ ಎಂಬುದು ಎಲ್ಲರಿಗೂ ಗೊತ್ತು. ಕಾಂಗ್ರೆಸ್ ನವರನ್ನೇ ಕೇಳಿದರೂ ಅವರೂ ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ನಾನು ಒಂದು ಪಕ್ಷದ ರಾಜ್ಯಾಧ್ಯಕ್ಷ. ಹೀಗಿರುವಾಗ ರಾಜ್ಯಾಧ್ಯಕ್ಷರೊಬ್ಬರ ವಿರುದ್ಧ ಮನಬಂದಂತೆ ಮಾತನಾಡಬೇಡಿ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚುವ ಯೋಗ್ಯತೆ ನಿಮಗಿಲ್ಲ. ನಾನು ನಿಮ್ಮಿಂದ ಪಾಠ ಕಲಿಯಬೇಕಿಲ್ಲ. ವಿಪಕ್ಷದವರ ಪ್ರಶ್ನೆಗೆ ಉತ್ತರಿಸುವ ತಾಕತ್ತಿದ್ದರೆ ಸದನದಲ್ಲಿ ಉತ್ತರಿಸಿ, ಅದನ್ನು ಬಿಟ್ಟು ದಬ್ಬಾಳಿಕೆ ನಡೆಸುವ ಅಗತ್ಯವಿಲ್ಲ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಿ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿಗೆ ಇಲ್ಲ ಎಂದು ಅಬ್ಬರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular