ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ, ನಟ ದಳಪತಿ ವಿಜಯ್ ಮೂರನೇ ಬಾರಿಗೆ ಇಂದು ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ನಟ ದಳಪತಿ ವಿಜಯ್ ವಿಚಾರಣೆಗೆ ಹಾಜರಾಗಿದ್ದಾರೆ. ತಮಿಳುನಾಡು ಚುನಾವಣೆ ಘೋಷಣೆ ಹೊತ್ತಲ್ಲೇ ವಿಜಯ್ ಸಿಬಿಐ ವಿಚಾರಣೆಗೆ ಹಾಜರಾಗಿದ್ದು, ಮಹತ್ವ ಪಡೆದುಕೊಂಡಿದೆ.
ಕರೂರಿನಲ್ಲಿ ಏರ್ಪಡಿಸಿದ್ದ ಟಿವಿಕೆ ಪಕ್ಷದ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 41 ಜನರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಗಿದ್ದು, ಈ ನಿಟ್ಟಿನಲ್ಲಿ ದಳಪತಿ ವಿಜಯ್ ವಿಚಾರಣೆ ನಡೆಯುತ್ತಿದೆ.

