HomeIndiaದಳಪತಿ ವಿಜಯ್ ವಿರುದ್ಧ ಪ್ರಕರಣ ದಾಖಲು

ದಳಪತಿ ವಿಜಯ್ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ತಮಿಳಿಗ ವೆಟ್ರಿ ಕಳಗಂ ಪಕ್ಷದಿಂದ ಸ್ಪರ್ಧಿಸುತ್ತಿರುವ ದಳಪತಿ ವಿಜಯ್, ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಆದರೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪರಂಬೂರ್ ನಲ್ಲಿ ಪ್ರಚಾರ ನಡೆಸುತ್ತಿದ್ದಾಗ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಟಿವಿಕೆ ಮುಖ್ಯಸ್ಥ, ನಟ ದಳಪತಿ ವಿಜಯ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೆರಂಬೂರು ಹಾಗೂ ಕೊಳತ್ತೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ವಿಜಯ್ ಭಾಗವಹಿಸಿದ್ದರು.ಭದ್ರತೆ ಕಾರಣಕ್ಕೆ ವಿಲ್ಲಿವಕ್ಕಂನಲ್ಲಿ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿತ್ತು. ವಿಜಯ್ ಭಾಗವಹಿಸಿದ್ದ ರ್ಯಾಲಿಯಲ್ಲಿ ಅನುಮತಿಗಿಂತ ಹೆಚ್ಚು ಧ್ವನಿವರ್ಧಕಗಳನ್ನು ಬಳಸಲಾಗಿದೆ. ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಅಲ್ಲದೇ 5 ಸಾವಿರಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದೆ ಎಂದು ಚುನಾವಣಾಧಿಕಾರಿ ಕುಮಾರ್ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಒಟ್ಟು 5 ಸೆಕ್ಷನ್ ಗಳ ಅಡಿಯಲ್ಲಿ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular