HomeIndiaBREAKING: ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್: 112 ಶಾಸಕರ ಬೆಂಬಲ ಪತ್ರ ಸಲ್ಲಿಕೆ;...

BREAKING: ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್: 112 ಶಾಸಕರ ಬೆಂಬಲ ಪತ್ರ ಸಲ್ಲಿಕೆ; ಬಹುಮತ ಸಾಬೀತು ಮಾಡಿ ಸರ್ಕಾರ ರಚಿಸಿ ಎಂದ ಗವರ್ನರ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆಯಾದರೂ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಕೊರತೆಯಿರುವುದರಿಂದ ವಿಜಯ್ ಸರ್ಕಾರ ರಚಿಸಲು ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ಟಿವಿಕೆ ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ಘೋಷಿಸದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯ ಟಿವಿಕೆಗೆ ಇದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಹೊಂದಿದೆ. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್ ಟಿವಿಕೆಗೆ ಬೆಂಬಲ ನೀಡಲು ಒಪ್ಪಿದೆ. ಆದರೆ, ಕಾಂಗ್ರೆಸ್ ಗೆದ್ದಿರುವ ಸ್ಥಾನಗಳು ಕೇವಲ 5. ಈ ಮೂಲಕ ಟಿವಿಕೆಯ ಸ್ಥಾನಗಳು 113ಕ್ಕೆ ಏರಿಕೆಯಾದರೂ ಇನ್ನೂ 5 ಸೀಟುಗಳ ಬೆಂಬಲದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ವಿಜಯ್ ಅವರಿಗೆ ಬಹುಮತ ಸಾಬೀತುಪಡಿಸಿ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದದರೆ. ಇದರಿಂದ ಇಂದು ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಲಾಗಿದೆ.

ಈ ನಡುವೆ ರಾಜ್ಯಪಾಲ ಅರ್ಲೇಕರ್ ವಿಜಯ್ ಅವರಿಗೆ ಲೋಕಭವನಕ್ಕೆ ಕೆರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಇಂದು ಕೂಡ ವಿಜಯ್ ರಾಜ್ಯಪಾಲರನ್ನು ಭೇಟಿಯಾಗಿ ಕೆಲ ಕಾಲ ಚರ್ಚಿಸಿದ್ದಾರೆ. ಈ ವೇಳೆ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿಮಾಡಿದ್ದಾರೆ. 112 ಶಾಸಕರ ಬೆಂಬಲ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುತ್ತೇನೆ. ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಇದಕ್ಕೆ ಒಪ್ಪದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್, 118 ಶಾಸಕರ ಬಹುಮತ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಿ. 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular