HomeIndiaBREAKING: ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್

BREAKING: ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚ ಸ್ವೀಕರಿಸಿದ್ದ ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್, ವಿಧನಾಸಭೆಯಲ್ಲಿ ಅಗ್ನಿ ಪರೀಕ್ಷೆ ಗೆದ್ದಿದ್ದಾರೆ. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ದಳಪತಿ ವಿಜಯ್ ವಿಶ್ವಾಸಮತ ಗೆದ್ದಿದ್ದಾರೆ.

ವಿಜಯ್ ನೇತೃತ್ವದ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿದೆ. ಒಟ್ಟು 144 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ವಿಜಯ್ ವಿಸ್ವಾಸ ಮತ ಗೆದ್ದಿದ್ದು, ಇನ್ನಾರು ತಿಂಗಳು ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ಸುರಕ್ಷಿತವಾಗಿ ಆಡಳಿತ ನಡೆಸಲಿದೆ.

ವಿಶ್ವಾಸಮತದ ವೇಳೆ ವಿಜಯ್ ವಿರುದ್ಧ 22 ಶಾಸಕರು ಮತ ಹಾಕಿದ್ದಾರೆ. ಎಐಎಡಿಎಂಕೆಯ 25 ಮಂದಿ ಬಂಡಾಯ ಶಾಸಕರೂ ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ವೇಲುಮಣಿ ಮತ್ತು ಷಣ್ಮುಗಂ ಶಾಸಕರು ನೇತೃತ್ವದ ಬಂಡಾಯ ಶಾಸಕರು ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ನಿಲುವನ್ನು ಧಿಕ್ಕರಿಸಿ ವಿಜಯ್ ಸರ್ಕಾರವನ್ನು ಬೆಂಬಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯ್ ಗೆ ಕಾಂಗ್ರೆಸ್ ನ ಐವರು, ವಿಸಿಕೆಯ ಇಬ್ಬರು, ಸಿಪಿಐ ನ ಇಬ್ಬರು ಶಾಸಕ್ರು, ಸಿಪಿಐ (ಎಂ)ನ ಇಬ್ಬರು, ಐಯುಎಂಎಲ್ ನ ಇಬ್ಬರು, ಎಐಎಡಿಎಂಕೆಯ 25 ಶಾಸಕರು ಸೇರಿ ಒಟ್ಟು ವಿಜಯ್ ಸರ್ಕಾರದ ಪರ 144 ಶಾಸಕರು ಬೆಂಬಲ ಘೋಷಿಸಿದ್ದಾರೆ.

ವಿಧನಾಸಭೆ ಚುನವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ವಿಜಯ್ ನೇತೃತ್ವದ ಟಿವಿಕೆಗೆ ಈಗ ವಿಶ್ವಾಸಮತಯಾಚನೆಯಲ್ಲಿಯೂ ಅತಿ ಹೆಚ್ಚು ಮತ ಪಡೆದುಕೊಂಡಂತಾಗಿದೆ. ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಗೆ ಸ್ಪೀಕರ್ ಶುಭಾಷಯಗಳನ್ನು ಕೋರಿದರು.

ವಿಶ್ವಾಸಮತ ಯಾಚನೆಗೂ ಮುನ್ನ ನಡೆದ ಚರ್ಚೆಯಲ್ಲಿ ಪ್ರತಿಪಕ್ಷ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಟಿವಿಕೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದು, ವಿಶ್ವಾಸಮತ ಯಾಚನೆ ನಡೆಯುತ್ತಿದೆ. ರಾಜ್ಯದ ಎಲ್ಲಾ ಜನರು ಟಿವಿಕೆಗೆ ಮತ ಹಾಕಿಲ್ಲ. ಒಟ್ಟು 4.93 ಕೋಟಿ ಮತಗಳಲ್ಲಿ, ಕೇವಲ 1.72 ಕೋಟಿ ಜನರು ಟಿವಿಕೆಗೆ ಮತ ಹಾಕಿದ್ದಾರೆ. ಉಳಿದ ಶೇ 65 ಜನರು ಟಿವಿಕೆ ವಿರುದ್ಧ ಮತ ಹಾಕಿದ್ದಾರೆ. ಟಿವಿಕೆಗೆ ಮತ ಹಾಕಿದ ಜನರಿಗೂ ಈಗ ಜ್ಞಾನೋದಯವಾಗುತ್ತಿದೆ. 118 ರ ಬಹುಮತದ ಚಿಹ್ನೆಯನ್ನು ಹೊಂದಿರುವ ಪಕ್ಷ ಮಾತ್ರ ಸರ್ಕಾರ ರಚಿಸಬಹುದು. ಟಿವಿಕೆ ನಾಯಕ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಈಗ ಜನರನ್ನು ಭೇಟಿ ಮಾಡಿ ಧನ್ಯವಾದ ಹೇಳುವುದಕ್ಕೂ ಮೊದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರಿಗೆ (ತಿರುಪತ್ತೂರು ಶಾಸಕ ಆರ್. ಸೀನಿವಾಸ ಸೇತುಪತಿ) ವಿಶ್ವಾಸಮತದಲ್ಲಿ ಪಾಲ್ಗೊಳ್ಳದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿರುವುದರಿಂದ ಟಿವಿಕೆ ಈಗ ಕೇವಲ 106 ಸದಸ್ಯರನ್ನು ಹೊಂದಿದೆ. ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡ ಪಕ್ಷಗಳಿಂದ ಬೆಂಬಲವನ್ನು ಟಿವಿಕೆ ಪಡೆದುಕೊಂಡಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular