HomeLive NewsBREAKING: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್: ಸರ್ಕಾರ ರಚನೆಗೆ ಹಕ್ಕು ಮಂಡನೆ

BREAKING: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್: ಸರ್ಕಾರ ರಚನೆಗೆ ಹಕ್ಕು ಮಂಡನೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಚೆನ್ನೈನ ಲೋಕಭವನಕ್ಕೆ ಆಗಮಿಸಿದ ವಿಜಯ್, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು ಮಧ್ಯಾಹ್ನ 3:30ಕ್ಕೆ ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಪ್ರಮಾಣವಚನ ಸ್ವೀಕಾರಕ್ಕೆ ಸಮಯ ಕೇಳಿದ್ದಾರೆ.

ಇದಕ್ಕೂ ಮುನ್ನ ವಿಜಯ್ ನೇತೃತ್ವದ ಟಿವಿಕೆಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದ್ದು, ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ವಿಜಯ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ. ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಬೇಕಾದ ಅಗತ್ಯ ಸಂಖ್ಯಾಬಲವನ್ನು ಒದಗಿಸಲು ಕಾಂಗ್ರೆಸ್ ಸಿದ್ಧವಿದ್ದು, ಈ ಸಂಬಂಧ ಅಧಿಕೃತ ಮಾತುಕತೆಗಳು ಪೂರ್ಣಗೊಂಡಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular