
ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. ಸಂಜೆ 5 ಗಂಟೆ 44 ನಿಮಿಷ ಸುಮಾರಿಗೆ ಗೊತ್ತುಪಡಿಸಿದ ಸ್ಥಳದಲ್ಲಿ ಲ್ಯಾಂಡರ್ ಮಾಡ್ಯೂಲ್ ಆಗಮನದ ನಿರೀಕ್ಷೆಯಿದೆ. ಕಾರ್ಯಾಚರಣೆಯ ನೇರ ಪ್ರಸಾರ ಸಂಜೆ 5.20ರಿಂದ ಆರಂಭವಾಗಲಿದೆ. ಸಂಜೆ 6 ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದಿರನನ್ನು ಸ್ಪರ್ಶ ಮಾಡಲಿದೆ ಎಂದು ಇಸ್ರೋ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.
Chandrayaan-3 Mission:
All set to initiate the Automatic Landing Sequence (ALS).
Awaiting the arrival of Lander Module (LM) at the designated point, around 17:44 Hrs. IST.Upon receiving the ALS command, the LM activates the throttleable engines for powered descent.
The… pic.twitter.com/x59DskcKUV— ISRO (@isro) August 23, 2023
ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆಯಾಗಿದ್ದು, ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ ಜೋರಾಗಿದೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3’ ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಚಂದ್ರಯಾನ-3 ಲೈವ್ ಆರಂಭವಾಗಲಿದೆ.

