ಗ್ರಾಮ ಆಡಳಿತ ಅಧಿಕಾರಿ ಹುದ್ದೆ ನೇರ ನೇಮಕಾತಿ: ಅಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ.23 ಕೊನೆ ದಿನ

ಬೆಳಗಾವಿ: ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 64 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ 1:1 ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು(PROVISIONAL LIST) ದಿನಾಂಕ: 15-01-2025 ರಂದು ಬೆಳಗಾವಿ ಜಿಲ್ಲಾ ವೆಬ್ ಸೈಟ್ https://belagavi.nic.in ನಲ್ಲಿ ಪ್ರಕಟಿಸಲಾಗಿದೆ.

ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತಾಗಿ ತಕರಾರು/ಆಕ್ಷೇಪಣೆಗಳಿದಲ್ಲಿ ದಿನಾಂಕ 16- 01-2025 ರಿಂದ ದಿನಾಂಕ 23-01-2025 ರಂದು ಸಂಜೆ 5.30 ಗಂಟೆಯ ಒಳಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ (ಸಿಬ್ಬಂದಿ ಶಾಖೆಗೆ) ಸಲ್ಲಿಸಬಹುದು.

ನಂತರ ಸ್ವೀಕೃತವಾಗುವ ತಕರಾರು/ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಸ್ವೀಕರಿಸಲಾದ ತಕರಾರು/ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 27-01-2025 ರಂದು ಸಂಜೆ 5.30 ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರನೇಮಕಾತಿ ಪ್ರಾಧಿಕಾರ ಕಾರ್ಯದರ್ಶಿಗಳಾದ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read